ಮೈತ್ರಿ ಬಿರುಕು ಸರಿಪಡಿಸಲು ಮಮತಾ ಬ್ಯಾನರ್ಜಿ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇ ಅವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ.

ಮಮತಾ ಇಲ್ಲದೆ ಮೈತ್ರಿ ಅಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಹಿಂದೆ ಹೇಳಿದ್ದು, ಇದೀಗ ಮಮತಾ ಅವರೊಂದಿಗೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ.

ಇನ್ನು ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸುವ ಮೂಲಕ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿಯಾಗಿದ್ದು, ಮಮತಾ ಇಲ್ಲದೆ ನಾವು ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

Comments (0)
Add Comment