‘ಮೋದಿ ಮತ್ತೆ ಪ್ರಧಾನಿಯಾಗಲು ನಮ್ಮೆಲ್ಲರ ಶ್ರಮ’ -ಯಡಿಯೂರಪ್ಪ

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಯೂ ಕಾಂಗ್ರೆಸ್ ತಕ್ಕ ಉತ್ತರ ನೀಡಲಿದ್ದು, 25ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮೋದಿ ಮತ್ತೆ ಪ್ರಧಾನಿಯಾಗಲು ನಾವೆಲ್ಲಾ ಜೊತೆ ಸೇರಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ನಾನು ಯಾರ ಬಳಿಯೂ ಮನವಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Comments (0)
Add Comment