ಯುಗಾದಿ, ರಂಜಾನ್‌ ರಜೆ: KSRTC ಯಿಂದ ವಿಶೇಷ ಬಸ್‌

ಯುಗಾದಿ, ರಂಜಾನ್‌ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು ಬೆಂಗಳೂರಿನಿಂದ ಹೆಚ್ಚುವರಿ ಬಸ್‌ಗಳನ್ನು ರಸ್ತೆಗಿಳಿಸಲು ನಿಗಮ ಮುಂದಾಗಿದೆ.

ಒಟ್ಟು 2275 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧಾರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ.
ಕೆಎಸ್‌ಆರ್‌ಟಿಸಿಯಿಂದ 1,750ಬಸ್‌, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿಸಿಯ 145 ಬಸ್‌, ಕೆಕೆಆರ್‌ಟಿಸಿಯ 200 ಬಸ್‌ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Comments (0)
Add Comment