ರಾಜ್ಯದಲ್ಲಿ ಕ್ಯಾನ್ಸರ್ ಹೊಸ ಪ್ರಕರಣಗಳ ಏರಿಕೆ..! ನಾಲ್ಕು ವರ್ಷಗಳಲ್ಲಿ 72,956 ಮಂದಿಯಲ್ಲಿ ರೋಗ ಪತ್ತೆ..!

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಾಂಧಿ ಸಂಸ್ಥೆಯ ನೋಂದಣಿ ಪ್ರಕಾರ ಕಳೆದ ನಾಲ್ಕು ವರ್ಷಗಳಲ್ಲಿ 72,956 ಮಂದಿಯಲ್ಲಿ ಕ್ಯಾನ್ಸರ್ ಪತ್ತೆಯಾಗಿದೆ ಹಾಗೂ ರಾಜ್ಯದಲ್ಲಿ ಕ್ಯಾನ್ಸರ್‌ನ ಹೊಸ ಪ್ರಕರಣಗಳು ಏರಿಕೆ ಕಂಡಿವೆ.

ಹೌದು.. ಬದಲಾದ ಜೀವನಶೈಲಿ ಪಾಶ್ಚತ್ಯ ಆಹಾರ ಪದ್ಧತಿ ಸೇರಿ ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕ್ಯಾನ್ಸರ್ ಹೊಸ ಪ್ರಕರಣಗಳು ಹೆಚ್ಚಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಾಗೂ ನೋಂದಣಿ ಪ್ರಕಾರ ಶೇ.50ರಷ್ಟು ರೋಗಿಗಳು ಕ್ಯಾನ್ಸರ್ ಚಿಕಿತ್ಸೆಗೆ ಮೂರು ಅಥವಾ ನಾಲ್ಕನೇ ಹಂತದಲ್ಲಿ ದಾಖಲಾಗುತ್ತಿದ್ದು, 14.3%ರಷ್ಟು ಮಂದಿಯಲ್ಲಿ ಮಾತ್ರ ಮೊದಲ ಹಾಗೂ ಎರಡನೇ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾಗುತ್ತಿದೆ.

ವರದಿ ಪ್ರಕಾರ ಕಳೆದ ನಾಲ್ಕು ವರ್ಷಗಳಲ್ಲಿ 3,294 ಮಂದಿ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಈ ಪ್ರಕರಣದಲ್ಲಿ ಪುರುಷರಲ್ಲಿ ಹೆಚ್ಚಾಗಿ ಪ್ರಾಸ್ಪೆಟ್, ಬಾಯಿ ಮತ್ತು ಅನ್ನನಾಳದ ಕ್ಯಾನ್ಸರ್ ಕಾಣಿಸಿಕೊಂಡರೆ, ಸ್ತನ, ಗರ್ಭಕಂಠ, ಗರ್ಭಾಶಯದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದೆ. ಬದಲಾದ ಜೀವನಶೈಲಿ ಹಾಗೂ ಆಹಾರ ಪದ್ಧತಿ ಜೊತೆಗೆ ಧೂಮಪಾನ, ಮದ್ಯಪಾನ, ಒತ್ತಡದ ಜೀವನ, ಕಲುಷಿತ ಪರಿಸರ ಸೇರಿ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ಎಂದು ಸಂಸ್ಥೆಯ ನಿರ್ದೇಶಕ ಡಾ.ಸೈಯದ್ ಅಲ್ತಾಫ್ ತಿಳಿಸಿದ್ದಾರೆ.

Comments (0)
Add Comment