ರಾಜ್ಯದಲ್ಲಿ ಮತ್ತೊಂದು ಪರೀಕ್ಷೆ ಅಕ್ರಮ ಬಯಲು.!

 

ಬೆಂಗಳೂರು: ರಾಜ್ಯದಲ್ಲಿ ಪಿಎಸ್‌ಐ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬಯಲಾಗಿದೆ.

ಎಫ್‌ಡಿಎ ಮತ್ತು ಎಸ್‌ಡಿಎ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಬ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದವರನ್ನು ಬಂಧಿಸಲಾಗಿದೆ.

ಯಾದಗಿರಿಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದ್ದರೆ, ಕಲಬುರ್ಗಿಯ ಶ್ರೀ ಶರಣಬಸವೇಶ್ವರ ವಿವಿಯಲ್ಲಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಸೊನ್ನ ಗ್ರಾಮದ ತ್ರಿಮೂರ್ತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Comments (0)
Add Comment