ರಾಜ್ಯದಲ್ಲಿ ಹುಕ್ಕಾ ಬಾರ್ ನಿಷೇಧ,ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ಹುಕ್ಕಾ, ತಂಬಾಕು ಅಥವಾ ನಿಕೋಟಿನ್ ಒಳಗೊಂಡ ನಿಕೋಟಿನ್ ರಹಿತ ತಂಬಾಕು ರಹಿತ ಸ್ವಾಧಭರಿತ, ಸ್ವಾಧರಹಿತ ಮೇಲಾಸಿಸ್ , ಶಿಶಾ ಹಾಗೂ ಇದೇ ಮಾದರಿಯ ಇನಿತ್ತರ ಹೆಸರುಗಳಿಂದ ಕರೆಯುವ ಹುಕ್ಕಾ ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಸೇವಿಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು 13 ವರ್ಷದಿಂದ 28-29 ರವರೆಗಿನ ಯುವಕರು ತಂಬಾಕು ಬಳಸುವ ಹುಕ್ಕಾಗೆ ಬಲಿಯಾಗುತ್ತಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ರಾಜ್ಯದಲ್ಲಿ ಹುಕ್ಕಾ ಬಾರ್‌ ನಿಷೇಧಿಸುವುದಾಗಿ ಹೇಳಿದ್ದರು.ಇದೀಗ ಅಧಿಕೃತವಾಗಿ ಕರ್ನಾಟಕದಲ್ಲಿ ಹುಕ್ಕಾ ಉತ್ಪನ್ನ ಹಾಗೂ ಮಾರಾಟ ನಿಷೇಧಿಸಲಾಗಿದೆ. ಆರೋಗ್ಯ ತಜ್ಞರು ಹುಕ್ಕಾ ಬಾರ್‌ಗಳ ಪರಿಣಾಮವನ್ನು ಅಧ್ಯಯನ ಮಾಡಿದ ನಂತರ ನಿಷೇಧಕ್ಕೆ ಶಿಫಾರಸು ಮಾಡಿದ್ದು ಒಂದು ವೇಳೆ ಕಾನೂನು ಉಲ್ಲಂಘನೆ ಮಾಡಿದರೆ COTPA 2003, 2015 ಕಾಯ್ದೆ ಅನ್ವಯ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

Comments (0)
Add Comment