ರಾಜ್ಯ ಸರ್ಕಾದಿಂದ 67 ತಹಶೀಲ್ದಾರ್‌ಗಳ ವರ್ಗಾವಣೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 67 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಈ ಸಂಬಂಧ ಹೊರಡಿಸಿರುವ ಆದೇಶ ಪತ್ರದಲ್ಲಿ ರಾಜ್ಯ ಸರ್ಕಾರವು, ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಅವರ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ ಎ‌ಂದು ಉಲ್ಲೇಖಿಸಲಾಗಿದೆ.

Comments (0)
Add Comment