ರಾಮಮಂದಿರ ಉದ್ಘಾಟನೆಗೆ ಸೋನಿಯಾ, ಖರ್ಗೆ ಸಹಿತ ಭಾಗವಹಿಸಲ್ಲ: ಕಾಂಗ್ರೆಸ್ ಹೇಳಿಕೆ

ನವದೆಹಲಿ: ಜನವರಿ 22ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ “ರಾಮ ಮಂದಿರದ ಆಹ್ವಾನ”ವನ್ನು ಆರ್‌ಎಸ್‌ಎಸ್-ಬಿಜೆಪಿ ಕಾರ್ಯಕ್ರಮ ಎಂದು ಕರೆಯುವುದರ ಮೂಲಕ ತಾವು ಕಾರ್ಯಕ್ರಮಕ್ಕೆ ಗೈರಾಗುವುದಿಲ್ಲ ಎಂದು ಹೇಳಿಕೆ ಮೂಲಕ ತಿಳಿಸಿದ್ದಾರೆ.

ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ, “ಕಳೆದ ತಿಂಗಳು, ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ, ಶ್ರೀಮತಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಅವರಿಗೆ ಜನವರಿ 22, 2024 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರಿಗೆ ಆಹ್ವಾನ ಬಂದಿದೆ.

ಶ್ರೀರಾಮನನ್ನು ನಮ್ಮ ದೇಶದಲ್ಲಿ ಲಕ್ಷಾಂತರ ಜನರು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯೂ ಸ್ಪಷ್ಟವಾಗಿ ಚುನಾವಣಾ ಲಾಭಕ್ಕಾಗಿ ಮಾಡಲಾಗಿದೆ ಎಂದು ಹೇಳಿದೆ.

Comments (0)
Add Comment