ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್‌: ಬೆಂಗಳೂರು, ಶಿವಮೊಗ್ಗ , ಹುಬ್ಬಳಿ ಜಿಲ್ಲೆಗಳಲ್ಲಿ ಎನ್‌ಐಎ ದಾಳಿ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಶಿವಮೊಗ್ಗ , ಹುಬ್ಬಳಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಗುರಪ್ಪನಪಾಳ್ಯದಲ್ಲಿ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಶಿವಮೊಗ್ಗದ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳ ತಂಡವು ಹಳೆ ಆರೋಪಿ ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್‌ಗೆ ಸಹಾಯ ಮಾಡಿದ ಸಾರ್ಧಾರ್ ನವೀದ್, ಈ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್‌, ನವೀದ್‌ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದ ಶಂಕಿತ ಉಗ್ರ ಯಾರು ಅನ್ನೋದನ್ನು ಇತ್ತೀಚೆಗಷ್ಟೇ ಎನ್‌ಐಎ ಪತ್ತೆ ಮಾಡಿತ್ತು. ಈ ಮೂಲಕ 2019ರಿಂದ ಎನ್‍ಐಎ ಅಧಿಕಾರಿಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಅನ್ನೋ ಮಾಹಿತಿಯನ್ನೂ ಬಹಿರಂಗಪಡಿಸಿತ್ತು.

Comments (0)
Add Comment