ರಾಮ ಮಂದಿರ ಉದ್ಘಾಟನೆಗೆ ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಇಲ್ಲ- ಸಿಎಂ ಘೋಷಣೆ

ತುಮಕೂರು: ಅಯೋಧ್ಯೆ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ನಾಳೆ ಸರ್ಕಾರಿ ರಜೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

  • ಜ. 22ರಂದು ಅಯೋಧ್ಯೆಯಲ್ಲಿ ನೂತನ ರಾಮಮಂದಿರದ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಬ್ಬದ ವಾತಾವರಣವಿದ್ದು, ರಾಜ್ಯದ ಜನತೆಯ ಈ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು.ಈ ಕುರಿತಾಗಿ ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ಇನ್ನು ರಾಮ ಮಂದಿರ ಉದ್ಘಾಟನೆ ಅಂತ ರಾಜ್ಯದಲ್ಲಿ ಸರ್ಕಾರಿ ರಜೆಯನ್ನು ನೀಡುವುದಿಲ್ಲ.ನಾಳೆ ಮಹದೇವಪುರದಲ್ಲಿ ನಿರ್ಮಾಣವಾಗುತ್ತಿರುವ ರಾಮ ದೇವಸ್ಥಾನ ಉದ್ಘಾಟನೆಗೆ ನನಗೆ ಆಹ್ವಾನ ಕೊಟ್ಟಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.ಇನ್ನು ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ನಾಳೆ ರಜೆ ಇಲ್ಲ ಎಂದು ಘೋಷಣೆ ಮಾಡಿದ್ದು, ರಾಜ್ಯದ ಕೋಟ್ಯಂತ ಜನರಿಗೆ ನಿರಾಸೆಯನ್ನುಂಟು ಮಾಡಿದೆ.
Comments (0)
Add Comment