ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ಸ್‌ಪೆಕ್ಟರ್, ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ..!

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇನ್ಸ್‌ಪೆಕ್ಟರ್, ಹೆಡ್‌ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 20 ಕೊನೆಯ ದಿನವಾಗಿದೆ.

ಎನ್ಐಎನಲ್ಲಿ ಇನ್ಸ್‌ಪೆಕ್ಟರ್ 43, ಸಬ್ ಇನ್ಸ್‌ಪೆಕ್ಟರ್ 51, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ 13, ಹೆಡ್ ಕಾನ್ಸ್‌ಟೇಬಲ್ 12 ಸೇರಿದಂತೆ 119 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 12ನೇ ತರಗತಿ ವಿದ್ಯಾರ್ಹತೆಯಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ವೇತನದ ವಿವರ; ನೇಮಕಾತಿ ಅಧಿಸೂಚನೆಯ ಅನ್ವಯ ಇನ್ಸ್‌ಪೆಕ್ಟರ್ ಹುದ್ದೆಗೆ 9300-34,800 ರೂ., ಸಬ್ ಇನ್ಸ್‌ಪೆಕ್ಟರ್ 35,400-112400 ರೂ., ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ 29,200-92,300 ರೂ. ಮತ್ತುಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ 25,500-81,700 ರೂ. ವೇತನ ನಿಗದಿ ಮಾಡಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಆಫ್‌ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕರಿಸಿ, SP (Adm), NIA HQ, Opposite CGO Complex, Lodhi Road, New Delhi-110003 ವಿಳಾಸಕ್ಕೆ ಫೆಬ್ರವರಿ 20ರೊಳಗೆ ತಲುಪುವಂತೆ ಸಲ್ಲಿಸಬೇಕು. ಅರ್ಜಿಗಳನ್ನು ಸ್ಪೀಡ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

Comments (0)
Add Comment