ರೈತನ ಮೇಲೆ ಚಿರತೆ ದಾಳಿ – ಕಿವಿ, ತಲೆಗೆ ಗಾಯ

ಮೈಸೂರು :ಮೈಸೂರು ಜಿಲ್ಲೆಯಲ್ಲಿ ಚಿರತೆ ಹಾಗೂ ಹುಲಿಗಳ ಕಾಟಗಳು ಹೆಚ್ಚಾಗಿದ್ದು ಜನರು ಹಾಗೂ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿವೆ.

ಇದೀಗ, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಕಿವಿ ಹಾಗೂ ತಲೆ ಭಾಗಕ್ಕೆ ಗಾಯಗೊಂಡ ಘಟನೆ ಪಿರಿಯಾಪಟ್ಟಣದ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡ ರೈತನನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಚಿರತೆ ದಾಳಿಯಿಂದ ಆಕ್ರೋಶಗೊಂಡಿರುವ ಜನರು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ವಿಶೇಷ ರಕ್ಷಣಾ ದಳ, ಚಿರತೆ ಕಾರ್ಯಪಡೆ ಭಾಗಿಯಾಗಿದ್ದು, ಕ್ಯಾಮರಾಗಳ ಮೂಲಕ ಹುಲಿ ಚಲನವಲನ ಪತ್ತೆ ಹಚ್ಚುತ್ತಿದ್ದಾರೆ. ಅನಗತ್ಯವಾಗಿ ಹೊರಗೆ ಓಡಾಡದಂತೆ ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಮನವಿ ಮಾಡಿದ್ದು, ಹುಲಿ ಸೆರೆ ಕಾರ್ಯಾಚರಣೆಗೆ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.

Comments (0)
Add Comment