ರೈತರಿಗೊಂದು ಮಾಹಿತಿ: ಫೆ.3ರಂದು ಎರೆಹುಳು ಗೊಬ್ಬರ ತರಬೇತಿ ಕಾರ್ಯಕ್ರಮ.!

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.3ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ “ಎರೆಹುಳು ಗೊಬ್ಬರ ಉತ್ಪಾದನಾ ತಾಂತ್ರಿಕತೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರ ತಜ್ಞ ಡಾ.ರುದ್ರಮುನಿ ಹಾಗೂ ಹಿರಿಯೂರು ತಾಲ್ಲೂಕಿನ ಗುಳಗೊಂಡನಹಳ್ಳಿ ಗ್ರಾಮದ ಎರೆಹುಳು ಗೊಬ್ಬರ ಉತ್ಪಾದನಾ ಪ್ರಗತಿಪರ ಕೃಷಿಕ ನಾಗರಾಜಪ್ಪ ಅವರು ವಿಷಯ ಮಂಡನೆ ಮತ್ತು ಪ್ರಾತ್ಯಕ್ಷಿಕೆ ನೀಡುವರು.

ಆಸಕ್ತ 50 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಆರ್.ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058) ಎಂ.ಉಷಾರಾಣಿ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಟಿ.ಪಿ. ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931028) ಮತ್ತು ಎಂ.ಜೆ. ಪವಿತ್ರಾ (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.

ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.

 

ರೈತರಿಗೊಂದು ಮಾಹಿತಿ: ಫೆ.3ರಂದು ಎರೆಹುಳು ಗೊಬ್ಬರ ತರಬೇತಿ ಕಾರ್ಯಕ್ರಮ.!
Comments (0)
Add Comment