ರೈತರ ದೆಹಲಿ ಚಲೋ ಪ್ರತಿಭಟನೆ – ಹರ್ಯಾಣಾದ ಶಂಭು ಗಡಿಯಲ್ಲಿ ಅಶ್ರುವಾಯು ಪ್ರಯೋಗ

ಹರ್ಯಾಣಾ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾವಿರಾರು ರೈತರು ಇಂದು ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನ ಮಾಡಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ರೈತರ ದೆಹಲಿ ಚಲೋ ಯಾತ್ರೆಯನ್ನು ತಡೆಯಲು ದೆಹಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದಾರೆ.

ಇನ್ನುಹಲವೆಡೆ ಕಾಂಕ್ರೀಟ್‌ ಗೋಡೆಗಳು ಮತ್ತು ತಂತಿಗಳನ್ನು ಅಳವಡಿಸಲಾಗಿದ್ದು ಈ ಮೂಲಕ ರೈತರು ದಿಲ್ಲಿ ಪ್ರವೇಶಿಸುವುದನ್ನು ತಡೆಯುವ ಯತ್ನ ಮಾಡಲಾಗಿದೆ.

Comments (0)
Add Comment