ರೈಲ್ವೇ ಇಲಾಖೆಯಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿದ್ದರೂ ಸೂಕ್ತವಾಗಿ ನೇಮಕಾತಿ ಇಲ್ಲ : ರಾಹುಲ್ ಗಾಂಧಿ ಆರೋಪ

ಬೆಂಗಳೂರು : ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ರೈಲ್ವೇ ಇಲಾಖೆಯಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿದ್ದರೂ ಸೂಕ್ತವಾಗಿ ನೇಮಕಾತಿ ಮಾಡಿಕೊಳ್ಳದೇ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ

ಯಾರಿಗೆ ಲಾಭ ಮಾಡಿ ಕೊಡಲು ರೈಲ್ವೆಯಲ್ಲಿ ಹುದ್ದೆಗಳ ಕಡಿತ ಮಾಡುತ್ತಿದ್ದೀರಿ. ರೈಲ್ವೆಯನ್ನು ಖಾಸಗೀಕರಣ ಮಾಡುವುದಿಲ್ಲ ಎಂಬ ನಿಮ್ಮ ಭರವಸೆ ಏನಾಯಿತು? ಎಂದು ಪ್ರಶ್ನಿಸಿದ್ದಾರೆ. ಇಷ್ಟು ವರ್ಷ ಕಾಯ್ದರೂ ಇಷ್ಟು ಕಡಿಮೆ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿರುವುದನ್ನು ನೋಡಿದರೆ ಮೋದಿಯವರ ಗ್ಯಾರಂಟಿ ಯುವಕರಿಗೆ ಎಚ್ಚರಿಕೆ ಕರೆಗಂಟೆಯಾಗಿದೆ ಎಂದು ಹೇಳಿ #NyayForYuva ಎಂಬ ಹ್ಯಾಶ್ ಟ್ಯಾಗ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Comments (0)
Add Comment