ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ಸ್ಥಾನವೂ ಎನ್ ಡಿಎ ತೆಕ್ಕೆಗೆ, ರಾಜಕೀಯ ವೈರಾಗ್ಯದ ಸುಳಿವು ನೀಡಿದ ಸದಾನಂದ ಗೌಡ

ಮಂಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದ್ದು, ರಾಜ್ಯದಲ್ಲಿ 28ರಲ್ಲಿ 28ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳಲಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧೆ, ಅಧಿಕಾರದಲ್ಲಿ ಆಸಕ್ತನಲ್ಲ. ಆದರೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕು, ಮೋದಿಯವರು ಮತ್ತೆ ಅಧಿಕಾರಕ್ಕೆ ಬರಬೇಕೆಂಬುದರಲ್ಲಿ ಆಸಕ್ತ ಎಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡಿರುವುದನ್ನು ಬಡ್ಡಿ ಸಹಿತ ಪಡೆದುಕೊಳ್ಳಲಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನೀರಿಕ್ಷಿತ ಹಿನ್ನಡೆ ಉಂಟಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿಯವರ ನೇತೃತ್ವದ ಆಡಳಿತ ಅತ್ಯಂತ ಯಶಸ್ವಿಯಾಗಿದೆ.‌ ಅವರಿಂದ ಈ ದೇಶದಲ್ಲಿ ಅಭಿವೃದ್ಧಿಗೆ ಅರ್ಥ ಬಂದಿದೆ. ಆದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ. ಗೆಲ್ಲಲಿದೆ ಎಂದರು. ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ ಎನ್ನುವುದು ಸತ್ಯ. ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ಇನ್ನು ನಾನು ಏನಾದರೂ ಪಕ್ಷಕ್ಕೆ ನೀಡಬೇಕಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸದಾನಂದ ಗೌಡ ಹೇಳಿದರು‌.

Comments (0)
Add Comment