ವಂಚನೆ ಆರೋಪದಡಿ ಹಿಂದೂ ಕಾರ್ಯಕರ್ತೆ ಬಂಧನ.!

 

ಬೆಂಗಳೂರು ; ವಂಚನೆ ಆರೋಪದ ಅಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ‌ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ 4 ಕೋಟಿ ರೂ. ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಚೈತ್ರಾ ಕುಂದಾಪುರ ಕೊಟ್ಟ ಹಣ ವಾಪಸ್ಸು ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ

ವಂಚನೆ ಆರೋಪದಡಿ ಹಿಂದೂ ಕಾರ್ಯಕರ್ತೆ ಬಂಧನ.!
Comments (0)
Add Comment