‘ವಂದೇ ಭಾರತ್ ರೈಲು ದೇಶದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ದಿನ ದೂರವಿಲ್ಲ’- ಮೋದಿ

ಹೊಸದಿಲ್ಲಿ: ಭಾರತೀಯ ರೈಲ್ವೇ ಪರಿವರ್ತನೆಗಾಗಿ ತಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಆದರೆ ಹಿಂದೆ ಆಧುನೀಕರಣಕ್ಕೆ ಹೆಚ್ಚಿನ ಗಮನ ನೀಡದಿರುವುದು ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡುವ ಮೊದಲು ಮಾತನಾಡಿದ ಪ್ರಧಾನಿ ಮೋದಿ,ಒಟ್ಟು ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳಲ್ಲಿ ವೇಗದ ಸಂಪರ್ಕವನ್ನು ಒದಗಿಸುತ್ತವೆ ಎಂದು

ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದ ಪ್ರಧಾನಿ ಮೋದಿ, ಮೂಲಸೌಕರ್ಯ ಅಭಿವೃದ್ಧಿಯ ವೇಗ ಮತ್ತು ಪ್ರಮಾಣವು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಹೊಂದಿಕೆಯಾಗುತ್ತಿದೆ ಎಂದು ಹೇಳಿದರು.

ಈಗಾಗಲೇ ವಂದೇ ಭಾರತ್ ರೈಲಿನಲ್ಲಿ 1,11,00,000 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ದೇಶದಲ್ಲಿ 25 ವಂದೇ ಭಾರತ್ ರೈಲುಗಳು ಓಡುತ್ತಿವೆ ಮತ್ತು ಈಗ ಒಂಬತ್ತು ರೈಲುಗಳನ್ನು ಸೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಈ ರೈಲುಗಳು ದೇಶದ ಎಲ್ಲಾ ಭಾಗಗಳಿಗೆ ಸಂಪರ್ಕ ಕಲ್ಪಿಸುವ ದಿನ ದೂರವಿಲ್ಲ ಎಂದರು.ಭಾರತದ ಬಡ ಮತ್ತು ಮಧ್ಯಮ ವರ್ಗದ ಜನರ ಅತ್ಯಂತ ವಿಶ್ವಾಸಾರ್ಹ ಸಹ-ಪ್ರಯಾಣಿಕ ಭಾರತೀಯ ರೈಲ್ವೆಯಾಗಿದೆ. ಒಂದೇ ದಿನದಲ್ಲಿ ರೈಲ್ವೆಯಲ್ಲಿ ಪ್ರಯಾಣಿಸುವವರ ಸಂಖ್ಯೆ ಅನೇಕ ದೇಶಗಳ ಜನಸಂಖ್ಯೆಗಿಂತ ಹೆಚ್ಚು ಎಂದು ಅವರು ಹೇಳಿದರು.

 

Comments (0)
Add Comment