ವಕೀಲ ಪ್ರೀತಮ್ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ.!

 

ಚಿತ್ರದುರ್ಗ : ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಮ್ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ವಕೀಲರ ಸಂಘದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ನ್ಯಾಯಾಲಯದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟ ನೂರಾರು ವಕೀಲರುಗಳು ಅಂಬೇಡ್ಕರ್ ಪ್ರತಿಮೆ ಮುಂಭಾಗದಿಂದ ಗಾಂಧಿವೃತ್ತಕ್ಕೆ ತೆರಳಿ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ಪ್ರತಿಭಟನೆಯುದ್ದಕ್ಕೂ ವಕೀಲರುಗಳು ಪೊಲೀಸರ ದೌರ್ಜನ್ಯ ಖಂಡಿಸಿ ಧಿಕ್ಕಾರಗಳನ್ನು ಕೂಗಿದರು.

ಚಿಕ್ಕಮಗಳೂರಿನಲ್ಲಿ ಗುರುವಾರ ಹೆಲ್ಮೆಟ್ ಧರಿಸದೆ ಬೈಕ್ನಲ್ಲಿ ಹೋಗುತ್ತಿದ್ದ ವಕೀಲ ಪ್ರೀತಮ್ನನ್ನು ತಡೆದ ಪೊಲೀಸರು ಏಕಾಏಕಿ ಬೈಕ್ನ ಕೀ ತೆಗೆದುಕೊಂಡು ಠಾಣೆಯೊಳಗೆ ಹೋದಾಗ ಹಿಂದೆಯೇ ಹೋದ ವಕೀಲ ಕೀ ಏಕೆ ಕಸಿದುಕೊಂಡಿದ್ದು, ನಾನೊಬ್ಬ ವಕೀಲ. ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದ್ದಕ್ಕೆ ದಂಡ ವಿಧಿಸಿ ಎಂದು ಹೇಳಿದಾಗ ಕುಪಿತಗೊಂಡ ಪೊಲೀಸರು ಮನಸೋಇಚ್ಚೆ ಥಳಿಸಿ ಕಾನೂನಿಗೆ ಅಗೌರವ ತೋರಿದ್ದಾರೆ. ಹಾಗಾಗಿ ಪೊಲೀಸರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಂಡು ಹಲ್ಲೆಗೊಳಗಾದ ವಕೀಲ ಪ್ರೀತಮ್ಗೆ ಸರ್ಕಾರ ಪರಿಹಾರ ನೀಡಬೇಕೆಂದು ಪ್ರತಿಭಟನಾನಿರತ ವಕೀಲರುಗಳು ಒತ್ತಾಯಿಸಿದರು.

ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಬಿ.ಎಂ.ಅನಿಲ್ಕುಮಾರ್, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಖಜಾಂಚಿ ಬಿ.ಇ.ಪ್ರದೀಪ್, ಜಂಟಿ ಕಾರ್ಯದರ್ಶಿ ಗಿರೀಶ್ ಬಿ. ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ದಾಸಪ್ಪ ಪಿ. ಸುರೇಶ್ ಎಸ್.ಕೆ. ಹೆಚ್.ಮೊಹಮದ್ ಇಮ್ರಾನ್, ಹರೀಶ್ ಎನ್. ಬಿ.ಎ.ರಾಜೀವ್, ಆರ್.ಧನಂಜಯ, ಎನ್.ಎಸ್.ವರುಣ, ಆರ್.ರವಿ, ರೂಪದೇವಿ ಬಿ.ಎನ್. ಶೀಲ ಪಿ. ಭಾರ್ಗವಿ ದ್ರಾವಿಡ್, ಹಿರಿಯ ವಕೀಲರುಗಳಾದ ಫಾತ್ಯರಾಜನ್, ನೂರುಲ್ಲಾ ಹಸನ್, ಬೀಸ್ನಳ್ಳಿ ಜಯಣ್ಣ, ಹೆಚ್.ಓ.ಜಗದೀಶ್ ಗುಂಡೇರಿ, ಸುದರ್ಶನ್, ಬಿ.ಸಿ.ವೆಂಕಟೇಶ್ಮೂರ್ತಿ, ಕೆ.ಎನ್.ವಿಶ್ವನಾಥಯ್ಯ, ಎನ್.ಬಿ.ವಿಶ್ವನಾಥ್, ಪಿ.ಹನುಮಂತಪ್ಪ, ಮೆಹರೂಝ್ಬೇಗಂ, ಶ್ವೇತ, ಅನೀಸ್ ಫಾತಿಮ ಸೇರಿದಂತೆ ಹಿರಿ ಕಿರಿಯ ವಕೀಲರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ವಕೀಲ ಪ್ರೀತಮ್ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ.!
Comments (0)
Add Comment