ವಚನ – ಅಕ್ಕಮಹಾದೇವಿ .!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೋಡುವ ಕಂಗಳಿಗೆ ರೂಪಿಂಬಾಗಿರಲು

ನೀವು ಮನನಾಚದೆ ಬಂದಿರಣ್ಣಾ.

ಕೇಳಿದ ಶ್ರೋತ್ರಸೊಗಸಿಗೆ ನೀವು ಮರುಳಾಗಿ ಬಂದಿರಣ್ಣಾ.

ನಾರಿಯೆಂಬ ರೂಪಿಂಗೆ ನೀವು ಒಲಿದು ಬಂದಿರಣ್ಣಾ.

ಮೂತ್ರವು ಬಿಂದು ಒಸರುವ ನಾಳವೆಂದು

ಕಂಗಾಣದೆ ಮುಂದುಗೆಟ್ಟು ಬಂದಿರಣ್ಣಾ.

ಬುದ್ಧಿಗೇಡಿತನದಿಂದ ಪರಮಾರ್ಥದ ಸುಖವ ಹೋಗಲಾಡಿಸಿಕೊಂಡು

ಇದಾವ ಕಾರಣವೆಂದರಿಯದೆ,

ನೀವು ನರಕಹೇತುವೆಂದರಿತು ಮನ ಹೇಸದೆ ಬಂದಿರಣ್ಣಾ.

ಚೆನ್ನಮಲ್ಲಿಕಾರ್ಜುನನಲ್ಲದೆ ಮಿಕ್ಕಿಹ ಪುರುಷರೆನಗೆ ಸಹೋದರರು. ಅಛೀ ಹೋಗಾ ಮರುಳೆ.

 

-ಅಕ್ಕಮಹಾದೇವಿ

ವಚನ – ಶರಣೆ ಅಕ್ಕಮಹಾದೇವಿ .!
Comments (0)
Add Comment