ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಪ್ಲೇಟ್ ಹಾಕಿಸಲು ಗುಡುವು ವಿಸ್ತರಣೆ.!

 

ಬೆಂಗಳೂರು: ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (HSRP) ಅಳವಡಿಸಿಕೊಳ್ಳಲು ಇದ್ದ ಅವಧಿಯನ್ನು ಫೆಬ್ರವರಿ 17ರವರೆಗೆ ವಿಸ್ತರಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.

ವಾಹನ ಮಾಲೀಕರು ಹೊಸ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಉತ್ಸಾಹ ತೋರಿರಲಿಲ್ಲ. ವಾಹನಗಳ ಮೂಲ ತಯಾರಿಕಾ ಸಂಸ್ಥೆಗಳು ಅನುಮತಿ ನೀಡಿದ ಏಜೆನ್ಸಿಗಳಿಗೆ HSRP ಅಳವಡಿಸುವ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಹಾಗಾಗಿ ಸಾರಿಗೆ ಇಲಾಖೆಗೆ ಕಟ್ಟುನಿಟ್ಟಾಗಿ ನಿಯಮ ಜಾರಿ ಮಾಡಲು ಆಗಿರಲಿಲ್ಲ. ಹಾಗಾಗಿ ಅವಧಿಯನ್ನು ವಿಸ್ತರಿಸಿದೆ.

HSRP ಪ್ಲೇಟ್ ಹಾಕಿಸುವುದು ಹೇಗೆ?

ಆನ್‌ಲೈನ್‌ನಲ್ಲೇ ಅವಕಾಶವಿದೆ. http// transport.karnataka.gov.in e www.siam.inners De@wo HSRP ee ಕ್ಲಿಕ್ ಮಾಡಬೇಕು. ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕು. ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ಬರುತ್ತದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ಕೆ ಮಾಡಿಕೊಂಡರೆ ಅವರೇ ಬಂದು ಫಿಟ್ ಮಾಡುತ್ತಾರೆ.

ವಾಹನ ಮಾಲೀಕರಿಗೆ ಗುಡ್ ನ್ಯೂಸ್: HSRP ಪ್ಲೇಟ್ ಹಾಕಿಸಲು ಗುಡುವು ವಿಸ್ತರಣೆ.!
Comments (0)
Add Comment