ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ: 2023-24ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನ.

ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಿ ತನ್ಮೂಲಕ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಸಾಂಸ್ಕøತಿಕ ವಾತಾವರಣ ಉಂಟು ಮಾಡುವಲ್ಲಿ ಶ್ರಮಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು Sevasindhu.Karnataka.gov.in  ಮುಖಾಂತರ 2023ರ  ಡಿಸೆಂಬರ್ 13 ರವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.Kannadasiri.Karnataka.gov.in ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 08022279954, 99866837037, 8792662814, 8792662816, 08022213530 ಗೆ ಸಂಪರ್ಕಿಸಬಹುದಾಗಿದೆ.

ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಧನಸಹಾಯಕ್ಕೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
Comments (0)
Add Comment