ವಿಶೇಷ ಸ್ಥಾನಮಾನ ರದ್ದು: ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ-ಮೋದಿ ಸಂತಸ

ಹೊಸದಿಲ್ಲಿ : ಜಮ್ಮು, ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದು, ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಕುರಿತು ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ.

ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ ಮತ್ತು 5 ಆಗಸ್ಟ್ 2019 ರಂದು ಭಾರತದ ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿಯುತ್ತದೆ.

ಇದು ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆಯನ್ನು ಪ್ರತಿಧ್ವನಿಸುವ ಘೋಷಣೆಯಾಗಿದೆ.
ನ್ಯಾಯಾಲಯವು ತನ್ನ ಆಳವಾದ ಬುದ್ಧಿವಂತಿಕೆಯಲ್ಲಿ, ಭಾರತೀಯರಾದ ನಾವು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸುವ ಮತ್ತು ಏಕತೆಯ ಸಾರವನ್ನು ಬಲಪಡಿಸಿದೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

Comments (0)
Add Comment