ಶಸ್ತ್ರಸಜ್ಜಿತರಿಂದ ಅಪಹರಣಕ್ಕೊಳಗಾದ ಪೊಲೀಸ್ ಅಧಿಕಾರಿ – ಕೆಲವೇ ಗಂಟೆಗಳಲ್ಲಿ ರಕ್ಷಣೆ

ಇಂಫಾಲ್: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮೈತೇಯ್ ಸಂಘಟನೆಯಾದ ಅರಂಬೈ ತೆಂಗೋಲ್‌ನ ಸುಮಾರು ಇನ್ನೂರಕ್ಕೂ ಹೆಚ್ಚು ಮಂದಿ ಶಸ್ತ್ರಸಜ್ಜಿತರಾಗಿ ಅಪಹರಿಸಿದ್ದು, ಕೆಲವೇ ಗಂಟೆಗಳಲ್ಲಿ ಅಧಿಕಾರಿಯನ್ನು ರಕ್ಷಿಸಲಾಗಿದೆ.

ಅಪಹರಣದ ವಿಚಾರ ಗೊತ್ತಾಗುತ್ತಲೇ ಎಚ್ಚೆತ್ತ ಪೊಲೀಸರು ಮತ್ತು ಭದ್ರತಾ ಪಡೆಗಳ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸ್ ಅಧೀಕ್ಷಕ ಅಮಿತ್ ಸಿಂಗ್ ಅವರನ್ನು ಸುರಕ್ಷಿತವಾಗಿ ಅಪಹರಣಕಾರರಿಂದ ರಕ್ಷಣೆ ಮಾಡಿದ್ದಾರೆ.

ಇನ್ನು ಕಳೆದ ಕೆಲ ತಿಂಗಳುಗಳಿಂದ ಮಣಿಪುರದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಕೆಲ ಗುಂಪುಗಳ ನಡುವೆ ಘರ್ಷಣೆಗಳು ನಡೆದು ಹಿಂಸಾತ್ಮಕ ರೂಪ ಪಡೆದುಕೊಳ್ಳುತ್ತಿವೆ ಇದರ ಮುಂದುವರೆದ ಭಾಗವಾಗಿ ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಯನ್ನು ಮನೆಯಿಂದಲೇ ಅಪಹರಣ ಮಾಡಿದೆ.

Comments (0)
Add Comment