ಶಿಕ್ಷಕರಿಗೆ ಗುಡ್ ನ್ಯೂಸ್:  ಸಚಿವ ಮಧು ಬಂಗಾರಪ್ಪ ತಿಳಿಸಿದರು.

 

ಚಿತ್ರದುರ್ಗ: ರಾಜ್ಯದಲ್ಲಿ 43 ಸಾವಿರ ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. 12,000 ಪದವಿಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರಿಂ ಕೋರ್ಟ್ ನೀಡಿದ ತಡೆಯಾಜ್ಞೆಯನ್ನು ಸೋಮವಾರ ತೆರವು ಗೊಳಿಸಲಾಗಿದೆ ಎಂದು  ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು  ಮಾತನಾಡಿದರು.

ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಶಾಲೆಗಳೂ ತುಂಬಾ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈ ಶಾಲೆಗಳಿಗೆ ಉತ್ತಮ ಬೇಡಿಕೆ ಇದೆ. ಇದಕ್ಕೆ ಕಾರಣ ಮಕ್ಕಳು ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವುದಾಗಿದೆ. ಈ ಶಾಲೆಗಳಲ್ಲಿ ಮಕ್ಕಳು 01 ರಿಂದ 12 ನೇ ತರಗತಿವರೆಗೆ ಸಂಪೂರ್ಣ ಉಚಿತ ಶಿಕ್ಷಣ ಪಡೆದು ಹೊರಬರುತ್ತಾರೆ.

ಬರುವ ಶೈಕ್ಷಣಿಕ ವರ್ಷದಿಂದ ಕೆ.ಪಿ.ಎಸ್. ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿಯಿಂದ ಶಿಕ್ಷಣ ನೀಡಲಾಗುವುದು. ಇದರಿಂದ ಮಕ್ಕಳ ಕಲಿಕೆಯಲ್ಲಿ ಯಾವುದೇ ಅಡೆ ತಡೆಗಳು ಬರುವುದಿಲ್ಲ. ಸ್ಥಳೀಯ ಶಾಸಕರುಗಳ ಅಭಿಪ್ರಾಯ ಪಡೆದು ಮೇಲ್ದೆರ್ಜೆಗೇರಿಸುವ ಶಾಲೆಗಳನ್ನು ಆಯ್ಕೆ ಮಾಡಲಾಗುವುದು ಎಂದರು.

.

 

 

ಶಿಕ್ಷಕರಿಗೆ ಗುಡ್ ನ್ಯೂಸ್:  ಸಚಿವ ಮಧು ಬಂಗಾರಪ್ಪ ತಿಳಿಸಿದರು.
Comments (0)
Add Comment