‘ಸಂಗೊಳ್ಳಿ ರಾಯಣ್ಣನ ಹೆಸರಲ್ಲಿ 110 ಎಕರೆಯಲ್ಲಿ ಸೈನಿಕ ಶಾಲೆ’ – ಸಿಎಂ ಸಿದ್ದರಾಮಯ್ಯ

ಮೈಸೂರು: ಸಂಗೊಳ್ಳಿ ರಾಯಣ್ಣ ಅವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು. ಸಂಗೊಳ್ಳಿಯಲ್ಲಿ 110 ಎಕರೆ ಜಾಗ ನೀಡಿ ಅಲ್ಲಿ ಸೈನಿಕ ಶಾಲೆಯನ್ನು ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15, ನೇಣು ಹಾಕಿದ್ದು ಜನವರಿ 26 ಅಂದೇ ನಮ್ಮ ಸಂವಿಧಾನ ಜಾರಿಗೆ ಬಂದಿತು. ಇದು ಕಾಕತಾಳೀಯವಾದರೂ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ ಎಂದರು.

ಇನ್ನು ಸಂಗೊಳ್ಳಿಯಲ್ಲಿ 110 ಎಕರೆ ಜಾಗ ನೀಡಿ ಅಲ್ಲಿ ಸೈನಿಕ ಶಾಲೆಯನ್ನು ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ತೆರೆಯಲಾಗಿದ್ದು, ರಾಕ್ ಗಾರ್ಡನ್, ವಸ್ತು ಸಂಗ್ರಹಾಲಯ, ಪ್ರಾಧಿಕಾರ ಮಾಡಲಾಗಿದ್ದು 285 ಕೋಟಿ ರೂ.ಗಳ ವೆಚ್ಚದಲ್ಲಿ ಆಗಿದೆ. ಅವರ ಜ್ಞಾಪಕಾರ್ಥವಾಗಿ ಇದನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Comments (0)
Add Comment