ಸರಕಾರಿ ಅಧಿಕಾರಿಗಳಿಗೆ ಶಾಕ್ -ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್

ಬೆಂಗಳೂರು:ಇಂದು ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ, ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್, ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮುಡಾ ಇಂಜಿನಿಯರ್ ಯಜ್ಞೇಂದ್ರ, ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್ ಹನುಮಂತರಾಯಪ್ಪ ಸೇರಿದಂತೆ ಹಲವಾರು ಸರಕಾರಿ ಹಾಗು ಉದ್ಯಮಿಗಳ ಕಛೇರಿ ಮತ್ತು ಮನೆಗಳ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Comments (0)
Add Comment