ಸರಕಾರ ಪಿಯುಸಿವರೆಗೆ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ-ಕಿಮ್ಮನೆ ರತ್ನಾಕರ್

ಉಡುಪಿ: ಪಿಯುಸಿವರೆಗಿನ ಶಿಕ್ಷಣವನ್ನು ಉಚಿತ ಶಿಕ್ಷಣವೆಂದು ಸರ್ಕಾರ ಘೋಷಿಸಲಿ. ಸರಕಾರ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದಾಗ ಸಮರ್ಥ ಭಾರತದ ನಿರ್ಮಾಣ ಸಾಧ್ಯ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಧುರ ಯುವಕ ಮಂಡಳದ ವಾರ್ಷಿಕೋತ್ಸವ ಮತ್ತು ರಾಜ್ಯ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿ ಸಾಧನೆಗೈದಿರುವ ಹುಟ್ಟೂರಿನ ಅಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದರು. ಶಿಕ್ಷಣ ಸಚಿವನಾಗಿದ್ದಾಗ ಶಿಕ್ಷಣದ ಬಗ್ಗೆ ಪ್ರಥಮ ಆದ್ಯತೆಯನ್ನು ನೀಡಿದ್ದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರಂಭಿಕವಾಗಿ ಮಾದರಿ ಶಾಲೆಗಳನ್ನು ರೂಪಿಸುವ ಯೋಜನೆಗಳನ್ನು ಹಮ್ಮಿಕೊಂಡಿದ್ದೆ. ಶಿಕ್ಷಣ ಎನ್ನುವುದು ಪ್ರತಿ ಮಗುವಿನ ಹಕ್ಕು ಆಗಿರುವುದರಿಂದ ಒಂದನೇ ತರಗತಿಯಿಂದ ಪಿಯುಸಿವರೆಗಿನ ಶಿಕ್ಷಣವನ್ನು ಉಚಿತಗೊಳಿಸಿದಾಗ ಪ್ರತಿಯೊಬ್ಬರು ಮೌಲ್ಯಯುತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

Comments (0)
Add Comment