ಸರ್ಕಾರದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಬಸವಂತಪ್ಪ ಭಾಗಿ

 

ದಾವಣಗೆರೆ: ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭಾಗವಹಿಸಿ ದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ,  ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಕಮಿಷನರ್ ರಾಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.

ಸರ್ಕಾರದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಬಸವಂತಪ್ಪ ಭಾಗಿ
Comments (0)
Add Comment