ಸರ್ಕಾರ ರಚನೆಗೆ ಹಕ್ಕು ಮಂಡಿಸಲು ತೆಲಂಗಾಣ ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್

ಹೈದರಾಬಾದ್: ತೆಲಂಗಾಣದ 64 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ರೇವಂತ್ ರೆಡ್ಡಿ ಮತ್ತು ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ ರವಿವಾರ ರಾತ್ರಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರನ್ನು ತೆಲಂಗಾಣ ರಾಜ್ಯದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ನೇಮಿಸಲಾಗಿತ್ತು. ಮತ ಎಣಿಕೆಗೆ ಮುಂಚಿತವಾಗಿ ತನ್ನ ಶಾಸಕರನ್ನು ಒಟ್ಟಾಗಿ ಇರಿಸಲು ಕಾಂಗ್ರೆಸ್‌ ಸಿದ್ಧತೆ ನಡೆಸಿತ್ತು.

ರಾಜ್ಯಪಾಲ ತಮಿಳಿ ಸೈ ಸೌಂದರರಾಜನ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ , ಈ ಹೊಸ ಚುನಾಯಿತ ಸದನದಲ್ಲಿ ನಾವು 65 ಸದಸ್ಯರೊಂದಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಿದ್ದೇವೆ. ನಾವು ನಾಳೆ ಬೆಳಿಗ್ಗೆ 9.30 ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನ ಕರೆದಿದ್ದೇವೆ ಎಂದು ತಿಳಿಸಿದರು.

Comments (0)
Add Comment