‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್

ಸ್ಟಾರ್ ನಟ ಮತ್ತು ನಿರ್ದೇಶಕರನ್ನೊಳಗೊಂಡ, ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಾಣದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ನ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ 12 ಮಿಲಿಯನ್ ವೀಕ್ಷಣೆಯಾಗಿದೆ. ಈ ಮೂಲಕ ಟೀಸರ್ ಟ್ರೆಂಡಿಂಗ್ ನಲ್ಲಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರದ ಟೀಸರ್ ಇಂದು ಮುಂಜಾನೆ 05:12ಕ್ಕೆ ಬಿಡುಗಡೆಯಾಗಿದ್ದು, ಹೊಸ ದಾಖಲೆಯನ್ನು ಬರೆಯುವ ಎಲ್ಲಾ ಮುನ್ಸೂಚನೆಯನ್ನು ನೀಡಿದೆ. ಈ ಚಿತ್ರದ ಕುರಿತು ಮಾತನಾಡುವ ನಿರ್ಮಾಪಕ ವಿಜಯ್ ಕಿರಗಂದೂರು, ಕನ್ನಡದ ನಿರ್ಮಾಣ ಸಂಸ್ಥೆಯೊಂದು, ಪ್ಯಾನ್ ಇಂಡಿಯಾ ಸ್ಟಾರ್ ಒಬ್ಬರ ಚಿತ್ರವೊಂದನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಾಡುತ್ತಿರುವುದು ಹೆಮ್ಮೆಯ ವಿಷಯ.

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ

ಕನ್ನಡದ ನಿರ್ಮಾಣ ಸಂಸ್ಥೆ, ನಿರ್ದೇಶಕರು, ತಂತ್ರಜ್ಞರು ಮತ್ತು ಕಲಾವಿದರು, ತೆಲುಗಿನ ಸ್ಟಾರ್ ನಟ ಪ್ರಭಾಸ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ತಮಿಳಿನ ಶ್ರುತಿ ಹಾಸನ್ ಹೀಗೆ ಎಲ್ಲ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಇಲ್ಲಿದ್ದಾರೆ. ಎಲ್ಲರನ್ನೂ ಸೇರಿಸಿ ಭಾರತೀಯ ಸಿನಿಮಾ ಮಾಡಿದ್ದೇವೆ. ಇವತ್ತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 28ಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎನ್ನುತ್ತಾರೆ. ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಸಲಾರ್’ ಚಿತ್ರವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ವಿದೇಶಗಳಲ್ಲೂ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆದಿದ್ದು, ಆಕ್ಷನ್ ದೃಶ್ಯಗಳಲ್ಲಿ ಬೇರೆ ದೇಶಗಳಿಂದ ಬಂದ ಹಲವು ನುರಿತ ಸಾಹಸ ಕಲಾವಿದರು ಕೆಲಸ ಮಾಡಿರುವುದು ಈ ಚಿತ್ರದ ವಿಶೇಷತೆಗಳಲ್ಲೊಂದು.

Comments (0)
Add Comment