ಸಹಾರಾ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತ ರಾಯ್ ನಿಧನ.!

 

ಮುಂಬೈ : ಸಹಾರಾ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತ ರಾಯ್ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.

1948ರಲ್ಲಿ ಅವರು ಬಿಹಾರದಲ್ಲಿ ಜನಿಸಿದರು. 1978ರಲ್ಲಿ ಕೇವಲ ₹ 2,000 ಬಂಡವಾಳದೊಂದಿಗೆ ಪ್ರಾರಂಭಿಸಲಾದ ಸಹಾರಾ ಗ್ರೂಪ್ ಕಂಪನಿಯು ಇದೀಗ ಮುಂಚೂಣಿಯಲ್ಲಿದೆ ಎಂದು ಕಂಪನಿ ತನ್ನ ವೆಬ್ಸೈಟ್ನಲ್ಲಿ ಹೇಳಿದೆ

ಸುಬ್ರತಾ ರಾಯ್ ಅವರ ಪರಂಪರೆ ಹಾಗೂ ಉದ್ಯಮದಲ್ಲಿ ಹೊಂದಿದ್ದ ಅವರ ದೃಷ್ಟಿಕೋನವನ್ನು ಮುಂದುವರೆಸಿಕೊಂಡು ಹೋಗಲಾಗವುದು ಎಂದು ಸಹಾರಾ ಗ್ರೂಪ್ ತಿಳಿಸಿದೆ

ಸಹಾರಾ ಗ್ರೂಪ್ ಸಂಸ್ಥಾಪಕ ಮತ್ತು ಅಧ್ಯಕ್ಷ ಸುಬ್ರತ ರಾಯ್ ನಿಧನ.!
Comments (0)
Add Comment