ಸಿಎಎ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ – ಲೋಕಸಭಾ ಎಲೆಕ್ಷನ್‌ಗೂ ಮುನ್ನ ಜಾರಿ – ಅಮಿತ್ ಶಾ

ಪೌರತ್ವ (ತಿದ್ದುಪಡಿ) ಕಾಯ್ದೆಯ (ಸಿಎಎ) ಅನುಷ್ಠಾನವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಸಿಎಎಯನ್ನು ಲೋಕಸಭಾ ಚುನಾವಣೆಗೂ ಮೊದಲೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಿವಾದದ ಬಳಿಕ ತಣ್ಣಗಾಗಿದ್ದ ಸಿಎಎ ಕುರಿತು ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಮಾಡಿರುವ ಘೋಷಣೆಯು ಹೊಸ ಚರ್ಚೆಗೆ ನಾಂದಿ ಹಾಡಿದೆ. ಇಡಿ ದೇಶದಲ್ಲಿ ಒಳನುಸುಳುವಿಕೆ, ಓಲೈಕೆ, ರಾಜಕೀಯ ಹಿಂಸಾಚಾರ ಮತ್ತು ಭ್ರಷ್ಟಾಚಾರದಿಂದ ನಲುಗುತ್ತಿದೆ. ಇದು ದೇಶದ ಕಾನೂನು. ಎಷ್ಟೇ ವಿರೋಧಿಸಿದರೂ ಇದರ ಜಾರಿಯನ್ನು ತಡೆಯಲು ಯಾರಿಗೂ ಸಾಧ್ಯವಾಗದು ಎಂದರು. ಈ ಕಾಯಿದೆಯನ್ನು ಡಿಸೆಂಬರ್ 2019 ರಲ್ಲಿ ಸಂಸತ್ತು ಅಂಗೀಕರಿಸಿತ್ತು. “ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ… ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆ” ಎಂದು ಶಾ ಹೇಳಿದ್ದಾರೆ.

Comments (0)
Add Comment