ಸಿಐಡಿಯ ಫ್ರೆಡ್ರಿಕ್ಸ್ ಖ್ಯಾತಿಯ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ

ಮುಂಬೈ : ಖ್ಯಾತ ಹಿಂದಿ ಧಾರವಾಹಿ ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಸೆಂಬರ್ 1 ರಂದು ದಿನೇಶ್ ಅವರಿಗೆ ಹೃದಯಾಘಾತವಾಗಿತ್ತು, ಈ ಹಿನ್ನಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಈ ಮಾಹಿತಿಯನ್ನು ಸಹ ನಟ ದಯಾನಂದ್ ಶೆಟ್ಟಿ ಅವರು ಖಚಿತ ಪಡಿಸಿದ್ದಾರೆ.

ನಾಲ್ಕು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿನೇಶ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಸಿಐಡಿಯಲ್ಲಿ ದಯಾ ಪಾತ್ರವನ್ನು ನಿರ್ವಹಿಸುತ್ತಿದ್ದ ದಯಾನಂದ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಹಲವಾರು ಟಿವಿ ಕಾರ್ಯಕ್ರಮದಲ್ಲಿ ದಿನೇಶ್ ಭಾಗಿಯಾಗಿದ್ದರೂ, ಹತ್ತಾರು ಧಾರಾವಾಹಿಗಳಲ್ಲಿ ನಟಿಸಿದ್ದರೂ, ಸಿಐಡಿ ಧಾರಾವಾಹಿ ಇವರಿಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು. ಈ ಧಾರಾವಾಹಿಯಲ್ಲಿ ಅವರು ಫ್ರೆಡೆರಿಕ್ಸ್ ಪಾತ್ರವನ್ನು ನಿರ್ವಹಿಸುತ್ತಿದ್ದರು. 20 ವರ್ಷಗಳ ಕಾಲ ಅವರು ಈ ತಂಡದೊಂದಿಗೆ ಸಕ್ರೀಯರಾಗಿದ್ದರು.

Comments (0)
Add Comment