‘ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ’- ಕೆ.ಎಸ್.ಈಶ್ವರಪ್ಪ

ಮೈಸೂರು: ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ. ಅವರು ಯಾವಾಗಲೂ ತಮ್ಮ ಶಕ್ತಿ ಮೇಲೆ ಸಿಎಂ ಆಗಿಲ್ಲ. 2013ರಲ್ಲಿ ಕೆಜೆಪಿ- ಬಿಜೆಪಿ ಅಂತ ವಿಭಾಗವಾಯಿತು ಹೀಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಗ್ಯಾರಂಟಿ ಹೇಳಿಕೊಂಡು ಸಿಎಂ ಆಗಿಬಿಟ್ಟರು. ಸಿದ್ದರಾಮಯ್ಯ ಅಪ್ಪಿತಪ್ಪಿ ಸಿಎಂ ಆಗಿದ್ದಾರೆ. ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಕಾಂಗ್ರೆಸ್‌ನವರ ಸ್ಥಿತಿ ಏನೆಂದು ಗೊತ್ತಾಗಲಿದೆ. ಗ್ಯಾರಂಟಿ ಯೋಜನೆಗಳು ಏನಾಗುತ್ತದೆಂದು ನೋಡಿ ಎಂದ ಹೇಳಿದರು.

ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರರಾಗಿದ್ದಾರೆ. ಮುಸಲ್ಮಾನರ ಜಾಗದಲ್ಲಿ ನಿಂತು ನರೇಂದ್ರ ಮೋದಿ, ಪ್ರತಾಪ್ ಸಿಂಹ ವಿರುದ್ಧ ಮಾತನಾಡಿಬಿಟ್ಟರೆ ಕಾಂಗ್ರೆಸ್‌ಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ. ಅದೇ ಕಾರಣಕ್ಕೆ ಮುಸಲ್ಮಾನರ ಎದುರು ಭಾಷಣ ಮಾಡಿದ್ದಾರೆ. ಇದೆಲ್ಲ ಮುಂದಿನ ಚುನಾವಣೆಯಲ್ಲಿ ನಡೆಯಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಸನಾತನ ಹಿಂದೂ ಧರ್ಮ ಮಲೇರಿಯಾ ಡೆಂಗ್ಯೂ ಇದ್ದಂತೆ ಹೇಳಿಕೆ ನೀಡಿರುವವರು ಭಸ್ಮವಾಗ್ತಾರೆ ಎಂದು ವಾಗ್ದಾಳಿ ನಡೆಸಿದರು.

ನನ್ನ ಮಗ ಕೂಡ ಎಂಪಿ ಟಿಕೆಟ್ ಆಕಾಂಕ್ಷಿ. ಹಾವೇರಿಯಿಂದ ಟಿಕೆಟ್ ಕೇಳಿದ್ದೇವೆ. ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೆಂದು ಕಾದು ನೋಡುತ್ತೇವೆ. ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತಾನೆ. ಇಲ್ಲದಿದ್ದರೆ ಟಿಕೆಟ್ ಕೊಟ್ಟವರಿಗೆ ಬೆಂಬಲ ನೀಡುವುದಾಗಿ ಹೇಳಿದರು.

Comments (0)
Add Comment