ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ  ಅಪ್ರೆಂಟಿಸ್‌ಗಳಾಗಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನ ಆಹ್ವಾನಿಸಿದೆ. ಅರ್ಜಿ ಪ್ರಕ್ರಿಯೆ ಫೆಬ್ರವರಿ 21 ರಂದು ಪ್ರಾರಂಭವಾಗಿದ್ದು, ಮಾರ್ಚ್‌ 6 ರವರೆಗೆ ಗಡುವು ನಿಗದಿಪಡಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.nats.education.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ವರ್ಷ ಒಟ್ಟು 3000 ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ನೇಮಕಾತಿ ಪರೀಕ್ಷೆಯನ್ನ ನಡೆಸಲಿದೆ.

ಅಪ್ರೆಂಟಿಸ್‌ ನೇಮಕಾತಿ 2024ಗೆ ಅಭ್ಯರ್ಥಿಯ ವಯಸ್ಸು 20 ರಿಂದ 28 ವರ್ಷಗಳು ಆಗಿದೆ.

Comments (0)
Add Comment