ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ ಗೆ ಗುಡ್ ನ್ಯೂಸ್ ನೀಡಿದ ಕೇಂದ್ರ

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ ಗೆ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಲು ಮುಂದಾಗಿದ್ದು, ಈ ಮೂಲಕ ಕಂಟೆಂಟ್ ಕ್ರಿಯೆಟರ್ಸ್‌ ಗೆ ಗುಡ್ ನ್ಯೂ ನೀಡಿದೆ.

ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ ಜಾಲತಾಣಗಳು ಹೆಚ್ಚಾಗಿ ಬಳಕೆಯಾಗುತ್ತಿವೆ. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಎಲ್ಲರೂ ಸಹ ಸಾಮಾಜಿಕ ಜಾಲತಾಣಗಳನ್ನು ಬಳಸುತ್ತಾರೆ. ಇವುಗಳ ಪ್ರಭಾವ ಜನರ ಮೇಲೆ ಹೆಚ್ಚಾಗುತ್ತಿದೆ. ಹೀಗೆ ಜನರ ಮೇಲೆ ಪ್ರವಾವ ಬೀರುವಂತಹ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೇಟರ್ಸ್ ಗಳಿಗೆ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧಾರ ಮಾಡಿದೆ.

ಕೇಂದ್ರವು ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿಯೇ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಿದೆ. ಜೊತೆಗೆ 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿ, ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿ ನೀಡಲು ಕೇಂದ್ರ ಮುಂದಾಗಿದೆ. ಯೂಟ್ಯೂಬ್, ಇನ್‌ಸ್ಟಾಗ್ರಾಮ್ ನಂತಹ ಸೋಷಿಯಲ್ ಮೀಡಿಯಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕಂಟೆಂಟ್ ಕ್ರಿಯೆಟರ್ಸ್‌ ಗಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

Comments (0)
Add Comment