ಸ್ಕೂಲ್‌ ವ್ಯಾನ್‌ – ಬಸ್‌ ನಡುವೆ ಅಪಘಾತ- ಚಾಲಕ,ವಿದ್ಯಾರ್ಥಿಗಳು ಸೇರಿ 7ಮಂದಿ ಮೃತ್ಯು

ಲಕ್ನೋ: ಸ್ಕೂಲ್‌ ವ್ಯಾನ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ವಿದ್ಯಾರ್ಥಿಗಳ ವ್ಯಾನ್ ಚಾಲಕ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುಡೌನ್‍ನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸುಮಾರು 16 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಚಾಲಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಾಲ್ಕು ಜನ ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಗಾಯಗೊಂಡವರ ಪಾಲಕರು ತಮ್ಮ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಇನ್ನು ಘಟನ ಸ್ಥಳಕ್ಕೆ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದ್ದಾರೆ. ಅಲ್ಲದೇ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

Comments (0)
Add Comment