ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಬೆಂಕಿ

ವಾಷಿಂಗ್ಟನ್: ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಖಲಿಸ್ತಾನಿ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಭಾನುವಾರ ಬೆಳಗ್ಗಿನ ಜಾವ 1:30-2:30 ರ ನಡುವೆ ಬೆಂಕಿ ಹಚ್ಚಲಾಗಿದೆ. ಕೇವಲ 5 ತಿಂಗಳ ಅವಧಿಯಲ್ಲಿ ಭಾರತೀಯ ರಾಯಭಾರ ಕಚೇರಿ ಮೇಲೆ ಖಲಿಸ್ತಾನಿ ಬೆಂಬಲಿಗರು ನಡೆಸಿರುವ 2ನೇ ದಾಳಿಯಾಗಿದೆ. ಸ್ಥಳೀಯ ಮಾಧ್ಯಮಗಳು ಹಂಚಿಕೊಂಡಿರುವ ವೀಡಿಯೋದಲ್ಲಿ ರಾಯಭಾರ ಕಚೇರಿಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ. ಈ ವೀಡಿಯೋವನ್ನು ಖಲಿಸ್ತಾನಿ ಬೆಂಬಲಿಗರು ಬಿಡುಗಡೆ ಮಾಡಿರುವುದಾಗಿ ತಿಳಿಸಲಾಗಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಮ್ಯಾಥ್ಯೂ ಮಿಲ್ಲರ್, ವಿಧ್ವಂಸಕತೆ ಹಾಗೂ ಬೆಂಕಿ ಹಚ್ಚುವ ಕೃತ್ಯವನ್ನು ಅಮೆರಿಕ ಬಲವಾಗಿ ಖಂಡಿಸುತ್ತದೆ. ಅಮೆರಿಕದಲ್ಲಿ ರಾಜತಾಂತ್ರಿಕ ಸೌಲಭ್ಯ ಹಾಗೂ ವಿದೇಶೀ ರಾಜತಾಂತ್ರಿಕರ ವಿರುದ್ಧ ಇಂತಹ ವಿಧ್ವಂಸಕತೆ ಹಾಗೂ ಹಿಂಸಾಚಾರ ಎಸಗುವುದು ಕ್ರಿಮಿನಲ್ ಅಪರಾಧ ಎಂದು ಹೇಳಿದ್ದಾರೆ.

Comments (0)
Add Comment