ಹಸೆಮಣೆಗೇರಿದ ಮೂರು ತಿಂಗಳಲ್ಲೇ ನವವಿವಾಹಿತೆ ಆತ್ಮಹತ್ಯೆ

ಕೇವಲ ಮೂರು ತಿಂಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಯುವತಿಯನ್ನು 26 ವರ್ಷದ ಕೃಷ್ಣವೇಣಿ (26) ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಕೃಷ್ಣವೇಣಿಯನ್ನು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಕೋಲಾರ ಮೂಲದ ಪೃಥ್ವಿರಾಜ್ (30) ಎಂಬಾತನ ಜೊತೆಗೆ ಕೃಷ್ಣವೇಣಿಗೆ ಕುಟುಂಬಸ್ಥರು ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು ಎನ್ನಲಾಗಿದ್ದು, ಪತಿ ಪೃಥ್ವಿರಾಜ್​​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಪ್ರೀತಿಯ ಮಗಳನ್ನು ಕಳೆದುಕೊಂಡ ಯುವತಿಯ ಪೋಷಕರು, ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ಕುಟುಂಬಸ್ಥರ ವಿರುದ್ಧ ಆರೋಪ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Comments (0)
Add Comment