ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು 2024 ರ ಜನವರಿ 10 ಕೊನೆ ದಿನವಾಗಿದೆ. 

ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು  https://ssp.postmatric.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ  ಸಲ್ಲಿಸಬಹುದು.

ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ  https://bcwd.karnataka.gov.in ವೆಬ್‍ಸೈಟ್ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Comments (0)
Add Comment