‘ಹುಸಿಬಾಂಬ್ ಕರೆ ಇಮೇಲ್ ಮೂಲ ಪತ್ತೆಗೆ ಸೂಚಿಸಿದ್ದೇನೆ’: ಸಿಎಂ

ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲ ಪತ್ತೆಹಚ್ಚುವಂತೆ ಹಾಗೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು ಮರುಕಳಿಸಬಾರದು, ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಪುನರಾವರ್ತನೆಯಾಗುತ್ತಿರುತ್ತವೆ ಇದು ಉತ್ತಮ ಬೆಳವಣಿಗೆಯಲ್ಲ. ಇದರಿಂಡ ಶಾಲಾ ಆಡಳಿತ ಮಂಡಳಿ, ಪೋಷಕರು, ಮಕ್ಕಳು, ಶಿಕ್ಷಕರು ಆತಂಕಕ್ಕೆ, ಒತ್ತಡಕ್ಕೆ ಒಳಗಾಗುತ್ತಾರೆ. ಇಂತಹ ಹುಸಿ ಬಾಂಬ್ ಬೆದರಿಕೆಯನ್ನು ಯಾರು ಕಳುಹಿಸುತ್ತಾರೆ, ಎಲ್ಲಿಂದ ಬರುತ್ತವೆ ಎಂದು ಪತ್ತೆಹಚ್ಚುವಂತೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ.

ಬೆದರಿಕೆ ಇ ಮೇಲ್ ನಲ್ಲಿ ನೀವು ಇಸ್ಲಾಂ ಮತಕ್ಕೆ ಸೇರಬೇಕು, ಇಲ್ಲದಿದ್ದರೆ ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಮೇಲ್ ನಲ್ಲಿ ಬರೆದಿರುವ ಆಗಂತುಕರು,ನೀವೆಲ್ಲ ಅಲ್ಲಾಹುವಿನ ವಿರೋಧಿಗಳು, ಸಾಯಲು ಸಿದ್ಧರಾಗಿರಿ ಎಂದಿದೆ.

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆ ಬಳಿ ಓಡೋಡಿ ಬಂದು ತಮ್ಮ-ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

Comments (0)
Add Comment