‘ಹೆಚ್ಚುವರಿ ಡಿಸಿಎಂ ಹುದ್ದೆಗೆ ಸಲಹೆ ನೀಡಿದ್ದೇವೆ’ – ಜಿ. ಪರಮೇಶ್ವರ್

ಬೆಂಗಳೂರು: ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಿದರೆ ಮುಂದೆ ಚುನಾವಣೆ ವೇಳೆ ಅನುಕೂಲ ಆಗುತ್ತದೆ, ಹೀಗಾಗಿ ಹೈಕಮಾಂಡ್ ಗೆ ಸಲಹೆ ನೀಡಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಾದ್ಯಮದೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಉಪಮುಖ್ಯ ಮಂತ್ರಿ ಮಾಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಆದರೆ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಸಿದರೆ , ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಸಲಹೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಚರ್ಚೆಮಾಡಲು ರಣದೀಪ್ ಸಿಂಗ್ ಸುರ್ಜೇವಾಲ ಆಹ್ವಾನಿಸಿದ್ದರು. ಡಿಸಿಎಂ ಹುದ್ದೆ ವಿಷಯವಾಗಿಯೇ ಚರ್ಚಿಸಲು ಅವರು ಸಭೆ ಕರೆದಿರಲಿಲ್ಲ. ಹೆಚ್ಚುವರಿ ಡಿಸಿಎಂ ಹೈಕಮಾಂಡ್ ಗೆ ಬಿಟ್ಟ ವಿಚಾರ. ನಾವು ಸಲಹೆ ಮಾಡಬಹುದು. ಸಲಹೆ ತೆಗೆದುಕೊಳ್ಳು ವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ್ ಎಂದು ಹೇಳಿದ್ದಾರೆ.

Comments (0)
Add Comment