ಹೆತ್ತ ಮಗು ಕೊಲೆ ಪ್ರಕರಣ: ಸುಚನಾ ಸೇಠ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಪಣಜಿ : ಹೆತ್ತ ಮಗುವನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸುಚನಾ ಸೇಠ್ ವಿರುದ್ಧ ಗೋವಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬೆಂಗಳೂರು ಮೂಲದ ‘ಮೈಂಡ್ ಫುಲ್ ಎ.ಐ ಲ್ಯಾಬ್’ ಎಂಬ ಸ್ಟಾರ್ಟ್ ಅಪ್ ಕಂಪನಿಯ ಸಿಇಒ ಸುಚನಾ ಸೇಠ್ ಅವರು ಗೋವಾದ ಹೊಟೇಲ್ ಒಂದರಲ್ಲಿ ತಮ್ಮ ನಾಲ್ಕು ವರ್ಷದ ಮಗು ಚಿನ್ಮಯ್ ನನ್ನು ಕೊಲೆ ಮಾಡಿದ್ದರು. ಆ ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಪ್ರಕರಣದ ತನಿಖೆ ಸಂಪೂರ್ಣಗೊಂಡಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಸುಚನಾ ಸೇಠ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಅನ್ನು ಸಲ್ಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Comments (0)
Add Comment