ಹೆಲಿಕಾಪ್ಟರ್‌ ಮೂಲಕ ಮೈದಾನಕ್ಕೆ ಎಂಟ್ರಿ ಕೊಟ್ಟ ಡೇವಿಡ್ ವಾರ್ನರ್

ಸಿಡ್ನಿ: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ಕ್ರಿಕೆಟ್ ಪಂದ್ಯಕ್ಕೆ ಹೆಲಿಕಾಪ್ಟರ್‌ ಮೂಲಕ ಹಾಲಿವುಡ್ ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ಭಾರಿ ವೈರಲ್ ಆಗುತ್ತಿದೆ.

ಇತ್ತೀಚೆಗೆ ತಮ್ಮ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ ವೃತ್ತಿಜೀವನಕ್ಕೆ ವಿದಾಯ ಹೇಳಿದ ಡೇವಿಡ್ ವಾರ್ನರ್, ಸಿಡ್ನಿಯಲ್ಲಿ ನಡೆಯುತ್ತಿರುವ ಸಿಡ್ನಿ ಥಂಡರ್ ಮತ್ತು ಸಿಡ್ನಿ ಸಿಕ್ಸರ್ಸ್ ಬಿಗ್ ಬ್ಯಾಷ್‌ ಲೀಗ್‌ ಪಂದ್ಯದಲ್ಲಿ, ವಾರ್ನರ್ ಸಿಡ್ನಿ ಥಂಡರ್ಸ್ ತಂಡದ ಪರ ಆಡುತ್ತಿದ್ದಾರೆ.

ಇಂದು ನಡೆದ ಪಂದ್ಯಾಟಕ್ಕೆ ಹಂಟರ್ ವ್ಯಾಲಿಯಲ್ಲಿ ನಡೆದ ತನ್ನ ಸಹೋದರನ ಮದುವೆಯಲ್ಲಿ ಪಾಲ್ಗೊಂಡು ನೇರವಾಗಿ ಬಿಬಿಎಲ್ ಪಂದ್ಯಕ್ಕೆ ಬಂದಿಳಿದಿದ್ದು, ಖಡಕ್ ಎಂಟ್ರಿ ನೀಡುವ ಎಲ್ಲ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

ಇನ್ನು 37 ವರ್ಷದ ಬ್ಯಾಟರ್ ಡೇವಿಡ್ ವಾರ್ನರ್ ಅದ್ಭುತ 13 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ 112 ಟೆಸ್ಟ್ ಮತ್ತು 161 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದರೊಂದಿಗೆ ಕ್ರಿಕೆಟ್ ಲೋಕದಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸುವ ಮೂಲಕ ಅದ್ಭುತ ಸಾದನೆ ಮಾಡಿದ್ದಾರೆ.

Comments (0)
Add Comment