ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆ ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು.

ಇನ್ನು ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಎಲ್​ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ.

Comments (0)
Add Comment