ಹ್ಯಾಂಗ್‌ಝೌನಲ್ಲಿ ಏಶ್ಯನ್ ಗೇಮ್ಸ್‌ಗೆ ಅದ್ದೂರಿ ಚಾಲನೆ

ಹ್ಯಾಂಗ್‌ಝೌ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್‌ ಗೇಮ್ಸ್‌ 19ನೇ ಆವೃತ್ತಿಗೆ ಅದ್ದೂರಿಯಾಗಿ ಚಾಲನೆ ನೀಡಿದ್ದಾರೆ.

ಭಾರತ ಹಾಕಿ ತಂಡದ ನಾಯಕ ಹರ್ಮನ್‌ ಪ್ರೀತ್‌ ಸಿಂಗ್‌ ಮತ್ತು ಒಲಿಂಪಿಕ್ಸ್‌ ಪದಕ ವಿಜೇತ ಬಾಕ್ಸರ್‌ ಲವ್ಲಿನಾ ಬೊರ್ಗೊಹೇನ್‌ ಉದ್ಘಾಟನ ಸಮಾರಂಭದಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದ್ದು, ಸೀರೆ ಮತ್ತು ಕುರ್ತಾದಲ್ಲಿ ಮಿಂಚಿದ್ದಾರೆ.

ಇನ್ನು ಚೀನಾದಲ್ಲಿ ಕೋವಿಡ್‌ ಕಾರಣಕ್ಕೆ ಒಂದು ವರ್ಷ ವಿಳಂಬವಾಗಿ ಏಶ್ಯನ್‌ ಗೇಮ್ಸ್‌ ನಡೆಯುತ್ತಿದೆ. ಏಷ್ಯಾ ಮತ್ತು ಮಧ್ಯಪ್ರಾಚ್ಯದ 45 ರಾಷ್ಟ್ರಗಳಿಂದ 12,000 ಕ್ಕೂ ಹೆಚ್ಚು ಸ್ಪರ್ಧಿಗಳು 40 ಕ್ರೀಡೆಗಳಲ್ಲಿ ಸ್ಪರ್ಧಿಸಲು ಹ್ಯಾಂಗ್‌ಝೌ ಗೆ ಆಗಮಿಸಿದ್ದಾರೆ.

ಭಾರತದ 655 ಸದಸ್ಯರ ತಂಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗಮನ ಸೆಳೆದಿದೆ.

Comments (0)
Add Comment