3.80 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆ: ಸಿದ್ದರಾಮಯ್ಯ

ತುಮಕೂರು:  ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಈ ಯೋಜನೆಯಿಂದ ಸರ್ಕಾರ ದಿವಾಳಿಯೂ ಆಗಿಲ್ಲಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನಲ್ಲಿಮಾತನಾಡಿದ ಅವರು 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ. ಇಷ್ಟು ದೊಡ್ಡ ಗಾತ್ರದ ಬಜೆಟ್ ಮಂಡನೆ ಮಾಡುತ್ತೇವೆಂದರೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದೇ ವೇಳೆ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಫಲಾನುಭವಿಗಳು ಹಾಗೂ ವೆಚ್ಚವನ್ನು ವಿವರಿಸಿದ ಸಿಎಂ, ಇವೆಲ್ಲವನ್ನೂ ಸರ್ಕಾರದಲ್ಲಿ ದುಡ್ಡು ಇಲ್ಲದಿದ್ದರೆ ಮಾಡಲಾಗುವುದಿಲ್ಲ” ಎಂದು ಹೇಳಿದ್ದಾರೆ.

ನುಡಿದಂತೆ ನಡೆಯುತ್ತಿದ್ದೇವೆ. 5 ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ರೂ. ಭರಿಸಿದ್ದೇವೆ. 3.80 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಲಿದ್ದು ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ

Comments (0)
Add Comment