‘ಚುನಾವಣಾ ಬಾಂಡ್‌ ಅಸಂವಿಧಾನಿಕ’: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯ ದೇಣಿಗೆಗಳನ್ನು ನೀಡಲು ಅನುಮತಿಸುವ ಚುನಾವಣಾ ಬಾಂಡ್ ಯೋಜನೆಯ ಸಿಂಧುತ್ವಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ಐತಿಹಾಸಿಕ ತೀರ್ಪು ನೀಡಿದ್ದು, ರಾಜಕೀಯ ನಿಧಿಗಾಗಿ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಸುಪ್ರೀಂ ಇಂದು ರದ್ದುಗೊಳಿಸಿದೆ.

ಕಪ್ಪು ಹಣ ನಿಗ್ರಹ ಮತ್ತು ದಾನಿಗಳನ್ನು ಅನಾಮಧೇಯತೆ ಕಾಪಾಡಿಕೊಳ್ಳುವುದಕ್ಕಾಗಿ ಇಲ್ಲವೇ ರಾಜಕೀಯ ಪಾರದರ್ಶಕತೆ ಅಗತ್ಯಗಳಿಗಾಗಿ ಚುನಾವಣಾ ಬಾಂಡ್‌ಗಳನ್ನು ಸಮರ್ಥಿಸಿಕೊಳ್ಳುವುದು ಆಧಾರವಾಗುವುದಿಲ್ಲ. ಯೋಜನೆಯು ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಮತ್ತು ಬದಲಿ ವ್ಯವಹಾರಗಳಿಗೆ ಕಾರಣವಾಗಬಹುದು ಎಂದು ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್‌ ಗವಾಯಿ, ಜೆ ಬಿ ಪರ್ದಿವಾಲಾ ಹಾಗೂ ಮನೋಜ್ ಮಿಶ್ರಾ ಅವರನ್ನೊಳಗೊಂಡ ಐವರು ಸದಸ್ಯರ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.

ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಚುನಾವಣಾ ಬಾಂಡ್​ಗಳ ಸಿಂಧುತ್ವದ ಕುರಿತು ಸುಪ್ರೀಂಕೋರ್ಟ್​ ತೀರ್ಪು ಪ್ರಮುಖವಾಗಿದೆ.

ಚುನಾವಣಾ ಬಾಂಡ್:
ಈ ಬಾಂಡ್​ಗಳು ಅನಾಮಧೇಯವಾಗಿರುತ್ತವೆ. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗ ಇರುವುದಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗ ಇರುವುದಿಲ್ಲ

Comments (0)
Add Comment