42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಿಸಿದ ಟಿಎಂಸಿ

ಪಶ್ಚಿಮ ಬಂಗಾಳ: ಮುಂಬರುವ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳನ್ನು ಘೋಷಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಭಾನುವಾರ (ಮಾರ್ಚ್ 10) ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಮಾರ್ಚ್ 10 ರಂದು, ಕೋಲ್ಕತ್ತಾದ ಬ್ರಿಗೇಡ್ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 42 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಬಹಿರಂಗಪಡಿಸಿತ್ತು.

ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಹೋಗಲಿದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅಭಿಷೇಕ್ ಬ್ಯಾನರ್ಜಿ ಡೈಮಂಡ್ ಹಾರ್ಬರ್ ನಿಂದ ಟಿಕೆಟ್ ಪಡೆದಿದ್ದಾರೆ. ಲೋಕಸಭೆಯಿಂದ ಉಚ್ಛಾಟಿತರಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಕೃಷ್ಣನಗರದಿಂದ ಕಣಕ್ಕೆಳಿಸಲಾಗಿದೆ.ಮೊಯಿತ್ರಾ ಅವರು 2019 ರ ಚುನಾವಣೆಯಲ್ಲಿ ಕೃಷ್ಣನಗರ ಸ್ಥಾನವನ್ನು ಗೆದ್ದರು ಆದರೆ 17 ನೇ ಲೋಕಸಭೆಯಿಂದ ಅವರು ನಗದು-ಪ್ರಶ್ನೆಗಾಗಿ ಹಗರಣದಲ್ಲಿ ತೊಡಗಿಸಿಕೊಂಡಿದ್ದರಿಂದ ಅನರ್ಹಗೊಳಿಸಲಾಯಿತು. ಇದೀಗ ಅದೇ ಕ್ಷೇತ್ರದಿಂದ ಮರು ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ

ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬರ್ಹಾಂಪೋರ್ ಕ್ಷೇತ್ರಕ್ಕೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧುರಿ ಅವರನ್ನು ಎದುರಿಸಲಿದ್ದಾರೆ.

Comments (0)
Add Comment